ಪರ್ತ್ ಟೆಸ್ಟ್:ವಿರಾಟ್ ಕೊಹ್ಲಿ 25ನೇ ಶತಕ

Update: 2018-12-16 04:34 GMT

 ಪರ್ತ್, ಡಿ.16: ಭಾರತದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯ ವಿರುದ್ಧ ಇಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೂರನೇ ದಿನವಾದ ರವಿವಾರ 25ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

ಔಟಾಗದೆ 82 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಕೊಹ್ಲಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಎಸೆತವನ್ನು ಬೌಂಡರಿ ಗೆರೆ ದಾಟಿಸುವ ಮೂಲಕ 214 ಎಸೆತಗಳಲ್ಲಿ ಶತಕ ಪೂರೈಸಿದರು.

ಕೊಹ್ಲಿ 257 ಎಸೆತಗಳಲ್ಲಿ 123 ರನ್ ಗಳಿಸಿ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದ್ದಾರೆ. ಕೊಹ್ಲಿ ಔಟಾಗುವ ಮೊದಲು 13 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದ್ದರು.

ಭಾರತ ಮೊದಲ ಇನಿಂಗ್ಸ್‌ನಲ್ಲಿ 94 ಓವರ್‌ಗಳಲ್ಲಿ 257 ರನ್‌ಗೆ 7 ವಿಕೆಟ್‌ಗಳನ್ನು ಕಳೆದುಕೊಂಡಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News