ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ರಾಷ್ಟ್ರಪತಿ

Update: 2018-12-16 09:52 GMT

ಬೆಂಗಳೂರು, ಡಿ. 16: ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ರವಿವಾರ ದೂರವಾಣಿ ಮುಖಾಂತರ ಸಂಪರ್ಕಿಸಿದ ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಬಹುತೇಕ ಸಹೋದ್ಯೋಗಿಗಳು ಮುಖ್ಯಮಂತ್ರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. 

ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನು ತಮ್ಮ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಅವರ ಪುತ್ರ ಚಿತ್ರ ನಟ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಆಚರಿಸಿಕೊಂಡರು.

ಜೈಪುರ ಮತ್ತು ಭೋಪಾಲದಲ್ಲಿ ಡಿ.17ರಂದು ನಡೆಯಲಿರುವ ರಾಜಾಸ್ಥಾನ ಮತ್ತು ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News