ಪ್ರಧಾನಿ ಮೋದಿ, ಅಮಿತ್ ಶಾ ದೇಶಕ್ಕೆ ಅಪಾಯಕಾರಿ: ಕೇಜ್ರಿವಾಲ್

Update: 2018-12-16 13:51 GMT

ಹೊಸದಿಲ್ಲಿ, ಡಿ.16: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ದೇಶದ ಸದ್ಯದ ಸ್ಥಿತಿ ಮತ್ತು ಭವಿಷ್ಯಕ್ಕೆ ಅಪಾಯಕಾರಿ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಜೋಡಿ ದೇಶದ ಪ್ರಸಕ್ತ ಸ್ಥಿತಿ ಮತ್ತು ಭವಿಷ್ಯಕ್ಕೆ ಅಪಾಯಕಾರಿಯಾಗಿದ್ದಾರೆ. 2019ರಲ್ಲಿ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೂ ಬಿಡಲಾರರು. ಇದು ನಡೆಯುವುದನ್ನು ತಡೆಯಲು ಏನು ಮಾಡಲು ಸಾಧ್ಯವೋ ಅದೆಲ್ಲವನ್ನೂ ಮಾಡಬೇಕು” ಎಂದು ಕೇಜ್ರಿವಾಲ್ ಹೇಳಿದರು.

ಮಧ್ಯಪ್ರದೇಶ, ಮಿಝೋರಾಂ, ರಾಜಸ್ತಾನ, ತೆಲಂಗಾಣ ಹಾಗು ಛತ್ತೀಸ್ ಗಢದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲನುಭವಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News