ವಿಷ ಸೇವಿಸಿದ ದಂಪತಿ: ಪತ್ನಿ ಸಾವು, ಪತಿಯ ಸ್ಥಿತಿ ಗಂಭೀರ

Update: 2018-12-16 13:54 GMT

ಶಿವಮೊಗ್ಗ, ಡಿ. 16: ಮನೆಯಲ್ಲಿಯೇ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದರಲ್ಲಿ ಪತ್ನಿ ಮೃತಪಟ್ಟು, ಪತಿಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಆಡುಗೋಡಿ ಗ್ರಾಮದಲ್ಲಿ ನಡೆದಿದೆ. 

ತುಂಗಮ್ಮ (50) ಮೃತಪಟ್ಟ ಪತ್ನಿ ಎಂದು ಗುರುತಿಸಲಾಗಿದೆ. ಪತಿ ತಿಮ್ಮಪ್ಪ (58) ರವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. 

ಮನೆಯಲ್ಲಿ ಯಾರೂ ಇಲ್ಲದ ವೇಳೆ ದಂಪತಿ ಕ್ರಿಮಿನಾಶಕ ಸೇವಿಸಿದ್ದರು. ವಿಷಯ ತಿಳಿದ ನೆರೆಹೊರೆಯವರು ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News