ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ

Update: 2018-12-16 13:58 GMT

ಶಿವಮೊಗ್ಗ, ಡಿ.16: ಸಾಲ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತರೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣ ಸಮೀಪದ ಕೂಡ್ಲಿ ಗ್ರಾಮದಲ್ಲಿ ನಡೆದಿದೆ. 

ಶ್ರೀನಿವಾಸ್ (42) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ವಿಷ ಸೇವಿಸಿದ್ದ ಇವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ. ಗ್ರಾಮಕ್ಕೆ ತಾಲೂಕು ಆಡಳಿತದ ಅಧಿಕಾರಿಗಳು ಭೇಟಿಯಿತ್ತು ಪರಿಶೀಲಿಸಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮೃತ ಶ್ರೀನಿವಾಸ್‍ರವರು 1 ಎಕರೆ ಜಮೀನು ಹೊಂದಿದ್ದರು. ಜಾವಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘ, ಶಿವಮೊಗ್ಗದ ಎಸ್‍ಬಿಐ ಬ್ಯಾಂಕ್ ಹಾಗೂ ಖಾಸಗಿಯಾಗಿ ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಸರಿಯಾಗಿ ಬೆಳೆ ಬರದಿದ್ದರಿಂದ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News