ಡಿ.20 ರಿಂದ ಬಾಬಾ ಬುಡನ್‌ ಗಿರಿಯಲ್ಲಿ ಪ್ರವಾಸಿಗರಿಗೆ ನಿಷೇಧ

Update: 2018-12-16 15:50 GMT

ಬೆಂಗಳೂರು, ಡಿ.16: ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿತಾಣವಾದ ಬಾಬಾ ಬುಡನ್‌ಗಿರಿಯಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ದತ್ತಪೀಠದಲ್ಲಿ ದತ್ತ ಜಯಂತಿ ಅಂಗವಾಗಿ ಪ್ರವಾಸಿಗರ ಭೇಟಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬಾಬಾ ಬುಡನ್‌ ಗಿರಿಯಲ್ಲಿ ಪ್ರವಾಸಿಗರ ಭೇಟಿ ನಿಷೇಧ ಮಾಡಲಾಗಿದ್ದು, ಮೂರು ದಿನಗಳ ಕಾಲ ನಡೆಯುವ ದತ್ತಿ ಜಯಂತಿಯಲ್ಲಿ ವಿವಿಧ ಕಡೆಗಳಲ್ಲಿ 30 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಗಿರಿಭಾಗ ಹಾಗೂ ನಗರದ ಶಾಂತಿ ಕಾಪಾಡಲು ಜಿಲ್ಲೆಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಕಳೆದ ವರ್ಷ ಮಾಲಾಧಾರಿಗಳು ಗೋರಿಗಳನ್ನು ದ್ವಂಸ ಮಾಡಿದ್ದರಿಂದ ಈ ಬಾರಿ ದತ್ತಪೀಠ ಹಾಗೂ ಇಡೀ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಗಿರಿಯ ರಸ್ತೆಗಳು ಘಾಟಿಯಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗಬಾರದೆಂದು ಹಾಗೂ ಸ್ವಚ್ಛತೆಯ ದೃಷ್ಟಿಯಿಂದಲೂ 3 ದಿನಗಳ ಕಾಲ ಗಿರಿಭಾಗದ ಪ್ರವಾಸವನ್ನ ಸಂಪೂರ್ಣ ನಿಷೇಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News