ಹನೂರು ವಿಷ ಪ್ರಸಾದ ಪ್ರಕರಣ: ಸಾಲೂರು ಮಠದ ಶ್ರೀಗಳ ವಿಚಾರಣೆ

Update: 2018-12-16 15:53 GMT

ಚಾಮರಾಜನಗರ,ಡಿ.16: ಕಿಚ್ಚುಗತ್ತಿ ಮಾರಮ್ಮನ ದೇಗುಲದ ಪ್ರಸಾದ ಸೇವಿಸಿ 13 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲೂರು ಮಠದ ಕಿರಿಯಶ್ರೀ ಇಮ್ಮಡಿ ಮಹಾದೇವ ಸ್ವಾಮಿ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಪಿ ಧರ್ಮೇಂದ್ರ ಕುಮಾರ್​ ಮೀನಾ ಅವರ ನೇತೃತ್ವದ ತಂಡ ಶ್ರೀಗಳನ್ನು ವಿಚಾರಣೆಗೆ ಒಳಪಡಿಸಿದೆ. ದೇಗುಲದ ಟ್ರಸ್ಟ್​ನ ಅಧ್ಯಕ್ಷರೂ ಆಗಿರುವ ಶ್ರೀಗಳು ದುರಂತ ನಡೆದ ದಿನದಂದು ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ದುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇವರ ಮೇಲೆ ವಿಷ ಬೆರೆಸಿರುವ ಆರೋಪ ಕೇಳಿ ಬಂದಿದ್ದರಿಂದ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. 

ಈಗಾಗಲೇ ಘಟನೆ ಸಂಬಂಧ 7 ಮಂದಿ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಶ್ರೀಗಳೂ ಸೇರಿ ಒಟ್ಟು 8 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರತ್ಯಕ್ಷದರ್ಶಿ ರಾಜಮ್ಮ ಎಂಬವರ ಹೇಳಿಕೆಯನ್ನು ಆಧರಿಸಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News