ಪ.ಬಂಗಾಳದಲ್ಲಿ ರಥಯಾತ್ರೆಗೆ ಅನುಮತಿ ನಿರಾಕರಣೆ

Update: 2018-12-16 17:10 GMT
ಕೃಪೆ: ANI

ಕೋಲ್ಕತಾ, ಡಿ.16: ರಥಯಾತ್ರೆ ನಡೆಸಲು ಅನುಮತಿ ನಿರಾಕರಿಸಿರುವ ಪಶ್ಚಿಮ ಬಂಗಾಳ ಸರಕಾರದ ನಿರ್ಧಾರವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಮತ್ತು ಇದನ್ನು ಖಂಡಿಸಿ ಬೀದಿಗಿಳಿದು ಪ್ರತಿಭಟಿಸಲಾಗುವುದು ಎಂದು ಪ.ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ರವಿವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದರ್ ಯಾದವ್ ಸೇರಿದಂತೆ ಬಿಜೆಪಿ ಮುಖಂಡರು ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದವರು ತಿಳಿಸಿದ್ದಾರೆ.

ನಮ್ಮ ರಾಜಕೀಯ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಯಾಕೆ ಅನುಮತಿ ನಿರಾಕರಿಸಿದೆ ಎಂದು ತಿಳಿದಿಲ್ಲ. ಇದನ್ನು ಪ್ರತಿಭಟಿಸಿ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಅಲ್ಲದೆ ರಾಜ್ಯಪಾಲರನ್ನು ಭೇಟಿಯಾಗಿ ಟಿಎಂಸಿ ಸರಕಾರದ ವಿರುದ್ಧ ದೂರು ಸಲ್ಲಿಸಲಿದ್ದೇವೆ ಎಂದು ಘೋಷ್ ತಿಳಿಸಿದ್ದಾರೆ. ಬಿಜೆಪಿಯ ಮೂವರು ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ರಥಯಾತ್ರೆಯ ಬಗ್ಗೆ ನಿರ್ಧಾರಕ್ಕೆ ಬರುವಂತೆ ಡಿಸೆಂಬರ್ 7ರಂದು ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ರಾಜ್ಯದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಹಾಗೂ ಡಿಜಿಪಿಗೆ ತಿಳಿಸಿತ್ತು.

ರಥಯಾತ್ರೆ ಸಾಗುವ ಪ್ರದೇಶದಲ್ಲಿ ಕೋಮುಗಲಭೆ ಸಂಭವಿಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿರುವುದರಿಂದ ರಥಯಾ      ತ್ರೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಶನಿವಾರ ಪ.ಬಂಗಾಳ ಸರಕಾರ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News