ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ

Update: 2018-12-16 17:35 GMT

ಮಂಡ್ಯ,ಡಿ.16: ಮನೆ ಮುಂದೆ ಆಟವಾಡುತ್ತಿದ್ದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿಯೊಂದು ಕಚ್ಚಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಾಗಮಂಗಲ ತಾಲೂಕಿನ ಗದ್ದೆಭೂವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ವಾಸವಾಗಿರುವ ಬಿಜಾಪುರ ಮೂಲದ ಸೋಮಯ್ಯ ಎಂಬವರ ಪುತ್ರಿ ಶುಭಬಾಯಿ(4) ಗಾಯಗೊಂಡ ಮಗು. ಆಟವಾಡುತ್ತಿದ್ದ ಮಗುವಿನ ಮೇಲೆ ಎರಗಿದ ನಾಯಿ ಬಲಗೈ, ತೋಳು ಸೇರಿದಂತೆ ದೇಹದ ಹಲವು ಕಡೆ ಕಚ್ಚಿ ಗಾಯಗೊಳಿಸಿದೆ. ಮಗುವಿನ ಚೀರಾಟ ಕೇಳಿದ ಪೋಷಕರು, ಮಗುವನ್ನು ನಾಯಿಯಿಂದ ರಕ್ಷಿಸಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

ನಾಗಮಂಗಲ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಾಂತರ ಪ್ರದೇಶದಲ್ಲಿ ಮಾಂಸದಂಗಡಿ ಹಾಗೂ ಕೋಳಿ ಅಂಗಡಿಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ ನಾಯಿಗಳ ಹಾವಳಿ ಜಾಸ್ತಿಯಾಗಿದೆ. ಅಲ್ಲದೆ ಕೆಲ ದಿನಗಳ ಹಿಂದೆ ಹುಚ್ಚುನಾಯಿ ಕಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಪುರಸಭೆ ಹಾಗೂ ಗ್ರಾಪಂಗಳು ನಾಯಿ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News