ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಇಬ್ಬರು ಮೃತ್ಯು
Update: 2018-12-17 18:50 IST
ಮುಂಬೈ, ಡಿ.17: ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈಯ ಅಂಧೇರಿಯಲ್ಲಿ ನಡೆದಿದೆ. ಆಸ್ಪತ್ರೆಯೊಳಗೆ ಹಲವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಇಲ್ಲಿನ ಇಎಸ್ ಸಿಐ ಆಸ್ಪತ್ರೆಯ ನಾಲ್ಕನೆ ಮಹಡಿಯಲ್ಲಿ ಅವಘಡ ಸಂಭವಿಸಿದ್ದು, 47 ಮಂದಿಯನ್ನು ರಕ್ಷಿಸಲಾಗಿದೆ. 50 ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಧಾವಿಸಿದೆ. “ಬೆಂಕಿ ಕಟ್ಟಡದ ಇತರ ಕೋಣೆಗಳಿಗೂ ವ್ಯಾಪಿಸುತ್ತಿದ್ದು, ಇನ್ನೂ ಹಲವರು ಸಿಲುಕಿದ್ದಾರೆಂದು ಶಂಕಿಸಲಾಗಿದೆ” ಎಂದು ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.