×
Ad

ಪಿಎಲ್‍ಡಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಸಚಿವ ಬಂಡೆಪ್ಪ ಕಾಶೆಂಪೂರ್

Update: 2018-12-17 20:04 IST

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.17: ರಾಜ್ಯದಲ್ಲಿರುವ ಭೂ ಅಭಿವೃದ್ಧಿ ಬ್ಯಾಂಕ್‍ಗಳ ಪುನಶ್ಚೇತನಕ್ಕೆ ಕ್ರಮ ವಹಿಸುವುದಾಗಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ನಿಯಮ 69ರ ಮೇರೆಗೆ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪಕಾಲಾವಧಿ ಚರ್ಚೆಯಲ್ಲಿ ಬಿಜೆಪಿ ಸದಸ್ಯರಾದ ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ ಹಾಗೂ ಎಸ್.ಕುಮಾರಬಂಗಾರಪ್ಪ ಪ್ರಸ್ತಾಪಿಸಿದ ವಿಷಯಕ್ಕೆ ಅವರು ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿರುವ ಭೂ ಅಭಿವೃದ್ಧಿ ಬ್ಯಾಂಕ್‍ಗಳಿಗೆ ಸಾಲಗಳ ಮರುಹೊಂದಾಣಿಕೆ ಮಾಡುವ ಮೂಲಕ ಪುನಶ್ಚೇತನಕ್ಕೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ ಅವರು, ಪ್ರಸ್ತುತ ಕೃಷಿ ಸಾಲಮನ್ನಾ ಯೋಜನೆ ಅಡಿ ಭೂ ಅಭಿವೃದ್ಧಿ ಬ್ಯಾಂಕ್‍ಗಳ ಸಾಲ ಮನ್ನಾ ಮಾಡುವ ಸಂಬಂಧ ಮುಖ್ಯಮಂತ್ರಿಗೆ ಕಡತವನ್ನು ರವಾನಿಸಲಾಗಿದೆ. ಮುಖ್ಯಮಂತ್ರಿಗಳು ಈ ಕುರಿತು ಸದನದಲ್ಲಿ ವಿವರವಾಗಿ ಪ್ರತಿಕ್ರಿಯಿಸಲಿದ್ದಾರೆ ಎಂದರು.

ವಿಷಯ ಪ್ರಸ್ತಾಪಿಸಿದ್ದ ಬಿಜೆಪಿ ಸದಸ್ಯ ಜೆ.ಸಿ.ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ರೈತರ ಕ್ಷೇಮಾಭಿವೃದ್ಧಿಗಾಗಿ ಹುಟ್ಟಿದ ಪಿಎಲ್‍ಡಿ ಬ್ಯಾಂಕುಗಳಲ್ಲಿ ಸಾಲ ಮಾಡಿರುವ ರೈತರು ಮನ್ನಾ ಆಗುವ ನೀರಿಕ್ಷೆಯಲ್ಲಿರುವುದರಿಂದ ಈ ಸಾಲಗಳ ಮೇಲಿನ ಬಡ್ಡಿ, ಸುಸ್ತಿಬಡ್ಡಿಯನ್ನು ಮನ್ನಾ ಮಾಡುವಂತೆ ಸರಕಾರದ ಗಮನ ಸೆಳೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News