ಹಾಸಿಗೆ, ದಿಂಬು ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ: ಅಪಾರ ನಷ್ಟ
Update: 2018-12-17 20:17 IST
ಬೆಂಗಳೂರು, ಡಿ.17: ಹಾಸಿಗೆ, ದಿಂಬು ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ನಗರದ ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂಭ್ರಮ ಕಾಲೇಜು ಸಮೀಪದ ಅಂಬಾ ಭವಾನಿ ದೇವಸ್ಥಾನ ಪಕ್ಕದಲ್ಲಿರುವ ಹಾಸಿಗೆ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿದೆ ಎಂದು ತಿಳಿದುಬಂದಿದೆ.
ಬೆಂಕಿಯ ಕೆನ್ನಾಲಿಗೆಗೆ ಅನೇಕ ಹಾಸಿಗೆಗಳು ಆಹುತಿಯಾಗಿವೆ. ಬೆಂಕಿಯ ಹೊಗೆ ಮುಗಿಲೆತ್ತರಕ್ಕೆ ಆವರಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ 3 ಅಗ್ನಿಶಾಮಕ ವಾಹನ ಬಂದಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.