ಡಿ.20ರಂದು ಸಾಧಕರೊಡನೆ ಸಂವಾದ ಕಾರ್ಯಕ್ರಮ: ನಿವೃತ್ತ ನ್ಯಾ.ಶಿವರಾಜ ಪಾಟೀಲ್ ಮುಖ್ಯ ಅತಿಥಿ
Update: 2018-12-17 21:19 IST
ಬೆಂಗಳೂರು, ಡಿ.17: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಿ.22ರಂದು ಸಂಜೆ 5.30ಕ್ಕೆ ನಗರದ ಕಸಾಪದ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾ.ಶಿವರಾಜ ಎ.ಪಾಟೀಲ್ ಸಾಧಕರೊಡನೆ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಕಸಾಪ ಅಧ್ಯಕ್ಷ ಮನು ಬಳಿಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಡಿ.20ಕ್ಕೆ ಪ್ರಶಸ್ತಿ ಪ್ರದಾನ: ಟಿ.ಶ್ರೀನಿವಾಸ ಸ್ಮರಣಾರ್ಥ ಪಿ.ಕೆ.ನಾರಾಯಣ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಡಾ.ಸಮತಾ ಬಿ.ದೇಶಮಾನೆಗೆ ಭಾಜನರಾಗಿದ್ದು, ಡಿ.20ರಂದು ಸಂಜೆ 5.30ಕ್ಕೆ ಕಸಾಪದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.