×
Ad

ಸಿಸಿಬಿ ಪೊಲೀಸರ ವಿರುದ್ಧವೇ ಎಫ್ಐರ್ ದಾಖಲು

Update: 2018-12-17 21:29 IST

ಬೆಂಗಳೂರು, ಡಿ.17: ದಾಳಿಯೊಂದರ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರ ಮೇಲೆಯೇ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನ್ಯಾಯಾಲಯದ ಆದೇಶದಂತೆ ಇಬ್ಬರು ಸಿಸಿಬಿ ಇನ್ಸ್‌ಪೆಕ್ಟರ್, ಒಬ್ಬ ಸಬ್ ಇನ್ಸ್‌ಪೆಕ್ಟರ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಾ. 28 ರಂದು ಜಿತೇಶ್ ಎಂಬವರ ರಿಕ್ರಿಯೇಶನ್ ಕ್ಲಬ್ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಈ ವೇಳೆ ಕ್ಲಬ್ ಮಾಲಕ ಜಿತೇಶ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದನ್ನು ಪ್ರಶ್ನಿಸಿ ಜಿತೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಸಿಸಿಬಿ ಪೊಲೀಸರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 341, 384, 441 ರ ಅಡಿ ಬಸವೇಶ್ವರ ನಗರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ರಮೇಶ್ ರಾವ್, ಪ್ರಕಾಶ್ ಹಾಗೂ ಎಸ್ಸೈ ಅಶ್ವಥಯ್ಯ ಎಂಬುವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News