ಪ್ರಶಸ್ತಿಗಳನ್ನು ಹಣಕ್ಕೆ ಮಾರಾಟ ಮಾಡಿಲ್ಲ: ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಶಿಲ್ಪಿ ಕಾಳಾಚಾರ್
Update: 2018-12-17 21:44 IST
ಬೆಂಗಳೂರು, ಡಿ.17: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಪ್ರಸ್ತಕ ಸಾಲಿನ ಗೌರವ ಪ್ರಶಸ್ತಿಗಳನ್ನು ಅಕಾಡೆಮಿಯು ಹಣಕ್ಕೆ ಮಾರಾಟ ಮಾಡುತ್ತಿದೆ ಎಂಬುದು ಸುಳ್ಳು ಎಂದು ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷ ಶಿಲ್ಪಿ ಕಾಳಾಚಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಶಸ್ತಿ ಪ್ರದಾನ ಮಾಡುವ ವಿಷಯದಲ್ಲಿ ಅಕಾಡೆಮಿಯ ಸದಸ್ಯರು ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಈ ಹಿಂದೆ ನೀಡಿರುವ ಪ್ರಶಸ್ತಿಗಳನ್ನು ಅರ್ಹ ಕಲಾವಿದರಿಗೆ ನೀಡಲಾಗಿತ್ತು. ಆದರೆ, ಇದೀಗ ಅವರ ಬಗ್ಗೆ ಅಪಪ್ರಚಾರ ಮಾಡುವುದು ಸೂಕ್ತವಲ್ಲ ಎಂದು ಹೇಳಿದರು.