×
Ad

ಎಸ್ಸಿ-ಎಸ್ಟಿ ಪತ್ರಿಕೋದ್ಯಮ ಅಭ್ಯರ್ಥಿಗಳಿಗೆ ವೃತ್ತಿಪರ ತರಬೇತಿ ಅರ್ಜಿ ಆಹ್ವಾನ

Update: 2018-12-17 21:52 IST

ಬೆಂಗಳೂರು, ಡಿ. 17: ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಎಸ್ಸಿಪಿ-ಟಿಎಸ್ಪಿ ಉಪಯೋಜನೆಯಡಿ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ತರಬೇತಿ ನೀಡಲು ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ(ಎಸ್ಸಿ)-25, ಪರಿಶಿಷ್ಟ ಪಂಗಡ(ಎಸ್ಟಿ)-5 ಯುವಕ- ಯುವತಿಯರಿಗೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ವೃತ್ತಿಪರ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 5 ತಿಂಗಳ ಕಾಲ ಮಾಸಿಕ ತಲಾ 15 ಸಾವಿರ ರೂ. ಭತ್ತೆಯನ್ನು ವೇತನವನ್ನಾಗಿ ನೀಡಲಾಗುವುದು. ರಾಜ್ಯದ ಯಾವುದೇ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದಿರುವವರಿಗೆ ಆದ್ಯತೆ ನೀಡಲಾಗುವುದು. ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದ ಪಕ್ಷದಲ್ಲಿ ಪದವಿ ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಪರಿಗಣಿಸಲಾಗುವುದು.

ವಯೋಮಿತಿ 40 ವರ್ಷಗಳು ಮೀರಿರಬಾರದು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‌ಸೈಟ್ www. karnataka media academy.com ಅಥವಾ ದೂರವಾಣಿ ಸಂಖ್ಯೆ: 2286 0164ಅನ್ನು ಸಂಪರ್ಕಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಎಸೆಸೆಲ್ಸಿ ಅಂಕಪಟ್ಟಿಯೊಂದಿಗೆ ತಮ್ಮ ವಿದ್ಯಾರ್ಹತೆ ಪತ್ರಗಳು, ಅಂಕಪಟ್ಟಿ, ಜಾತಿಪ್ರಮಾಣ ಪತ್ರ, ಛಾಯಾಚಿತ್ರಗಳನ್ನು ಸ್ಕ್ಯಾನ್ ಮಾಡಿ ಇಮೇಲ್ ವಿಳಾಸ, ದೂರವಾಣಿ ಸಂಖ್ಯೆಗಳನ್ನು ನಮೂದಿಸಿ traineekma@gmail.com ಮೂಲಕ ಅಥವಾ ಅಂಚೆ ಮೂಲಕ 2019ರ ಜನವರಿ 8ರ ಒಳಗಾಗಿ ಕಳುಹಿಸಲು ಕೋರಿದೆ.

ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳಿಂದ ಈ ಹಿಂದೆ ಈ ರೀತಿಯ ತರಬೇತಿ ಅಥವಾ ಸೌಲಭ್ಯಗಳನ್ನು ಪಡೆದಿರುವವರು ಅರ್ಜಿ ಸಲ್ಲಿಸಬಾರದು. ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದೆ.

ತರಬೇತಿಗೆ ಸತತ 7 ದಿನಗಳು ಗೈರುಹಾಜರಾದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಅವರನ್ನು ತರಬೇತಿಯಿಂದ ಮುಕ್ತಗೊಳಿಸಲಾಗುವುದು. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಮಾಧ್ಯಮ ಅಕಾಡೆಮಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News