ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಜ್ಜನ್‌ಕುಮಾರ್ ರಾಜೀನಾಮೆ

Update: 2018-12-18 06:34 GMT

ಹೊಸದಿಲ್ಲಿ, ಡಿ.18: ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 ಸೋಮವಾರ ದಿಲ್ಲಿ ಹೈಕೋರ್ಟ್‌ನಿಂದ 1984ರ ಸಿಖ್ ವಿರೋಧಿ ದಂಗೆಯಲ್ಲಿ ಭಾಗಿಯಾದ ಆರೋಪದಲ್ಲಿ ಸಜ್ಜನ್‌ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು.
 ‘‘ನನ್ನ ವಿರುದ್ಧ ಗೌರವಾನ್ವಿತ ದಿಲ್ಲಿ ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ಸಜ್ಜನ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News