ಸಿಎಂ ಕುಮಾರಸ್ವಾಮಿ ನಿವಾಸಕ್ಕೆ ಹುಸಿ ಬಾಂಬ್ ಕರೆ: ಯುವಕನ ಬಂಧನ

Update: 2018-12-18 15:01 GMT

ಬೆಂಗಳೂರು, ಡಿ.18: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದ ಆರೋಪದಡಿ ಯುವಕನೋರ್ವನನ್ನು ಇಲ್ಲಿನ ಜೆ.ಪಿ.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮನ್ಸೂರ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಡಿ.16ರಂದು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಬಾಂಬ್ ಇಟ್ಟಿದ್ದೇನೆ ಎಂದು ಗೋಪಾಲ್ ಎಂಬವರ ಹೆಸರಿನಲ್ಲಿ ಬೆದರಿಸಿದ್ದ ಎನ್ನಲಾಗಿದೆ. ಈ ಸಂಬಂಧ ತನಿಖೆ ನಡೆಸಿದಾಗ ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ.

ಕುಮಾರಸ್ವಾಮಿ ಕುಟುಂಬದ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕರೆ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಯ ವಿರುದ್ಧ ಕಲಂ 182, 507 ಐಪಿಸಿ ಸೆಕ್ಷನ್ ದೂರು ದಾಖಲಿಸಿಕೊಂಡು ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

‘ಮುಖ್ಯಮಂತ್ರಿ ಭೇಟಿಗಾಗಿ ಕರೆ’

ಪರಪ್ಪನ ಅಗ್ರಹಾರದ ನಿವಾಸಿ ಆಗಿರುವ ಬಂಧಿತ ಆರೋಪಿ ಮನ್ಸೂರ್, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನೋಡಬೇಕೆಂದು ಆಸೆ ಇಟ್ಟುಕೊಂಡಿದ್ದ. ಇತ್ತೀಚಿಗೆ ಕುಮಾರಸ್ವಾಮಿ ಅವರನ್ನು ನೋಡಲು ಅವರ ನಿವಾಸದ ಬಳಿ ಹೋಗಿದ್ದ ವೇಳೆ, ಭದ್ರತಾ ಸಿಬ್ಬಂದಿಗಳು ಅನುಮತಿ ನೀಡಿರಲಿಲ್ಲ. ಹೀಗಾಗಿ, ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News