ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯ ಸರಕಾರ ತೀರ್ಮಾನ

Update: 2018-12-18 15:06 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ. 18: ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳಿಗೆ ಸರಕಾರಿ, ಖಾಸಗಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳು ಪ್ರವೇಶ ಸಂದರ್ಭದಲ್ಲಿ ಪಾವತಿಸಿರುವ ಶುಲ್ಕ, ಹಾಸ್ಟೆಲ್ ಶುಲ್ಕ, ವಸತಿ ಶುಲ್ಕದ ದೃಢೀಕರಿಸಿದ ಪ್ರತಿಯನ್ನು ಸಲ್ಲಿಸಬೇಕು. ತಾಲೂಕು ಮತ್ತು ಜಿಲ್ಲಾ ಕೃಷಿ ಜಂಟಿ ನಿರ್ದೇಶಕರು ಆತ್ಮಹತ್ಯೆಗೆ ಶರಣಾದ ರೈತರ ದೃಢೀಕರಣ ಪತ್ರದ ಪ್ರತಿಗಳನ್ನು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News