ನೀಟ್ ಪರೀಕ್ಷೆ: ವೈಯಕ್ತಿಕ ವಿವರಗಳು ಸೋರಿಕೆಯಾಗಿದ್ದರೆ ತನಿಖೆ; ಡಿ.ಕೆ.ಶಿವಕುಮಾರ್

Update: 2018-12-18 16:58 GMT

ಬೆಳಗಾವಿ, ಡಿ.18: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ( ನೀಟ್) ಬರೆದ ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳು ಸೋರಿಕೆಯಾಗಿದ್ದರೆ ಆ ಕುರಿತು ಮಾಹಿತಿ ಪಡೆದು ತನಿಖೆ ನಡೆಸುವುದಾಗಿ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಇಂದು ಪ್ರಕಟಿಸಿದರು.

ಪ್ರಶ್ನೋತ್ತರ ಕಲಾಪ ವೇಳೆ ಶಾಸಕ ವಿ.ಸೋಮಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರ ಸರ್ಕಾರವು ನೀಟ್ ಪರೀಕೆಯನ್ನು ನಡೆಸುತ್ತದೆ. ಈ ಬಗ್ಗೆ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳ ಮಾಹಿತಿ ಸೋರಿಕೆ ಆಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಒಂದು ವೇಳೆ ಸೋರಿಕೆಯಾಗಿದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡು ಬಂದಲ್ಲಿ ಈ ವಿಷಯದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ವೈಯಕ್ತಿಕ ಮಾಹಿತಿ ಸೋರಿಕೆ ಆಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಿಸಿರುವ ಕುರಿತು ಸರ್ಕಾರಕ್ಕೆ ಮಾಹಿತಿ ಇಲ್ಲದಿರುವುದರಿಂದ ವಂಚಕರು ವಿದ್ಯಾರ್ಥಿ ಹಾಗೂ ಪೋಷಕರಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ಆಮಿಷ ಒಡ್ಡುತ್ತಿರುವ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ ವಂಚಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News