ಪ್ರಾತಿನಿದ್ಯಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಮಾಜಿ ಶಾಸಕರ ಸಭೆ

Update: 2018-12-18 17:35 GMT

ಬೆಂಗಳೂರು, ಡಿ.13: ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕದಲ್ಲಿ ಮಾಜಿ ಶಾಸಕರನ್ನು ಪರಿಗಣಿಸಬೇಕೆಂದು ಮಾಜಿ ಶಾಸಕರ ನಿಯೋಗ ಕಾಂಗ್ರೆಸ್ ಹೈ ಕಮಾಂಡ್‌ನ್ನು ಒತ್ತಾಯಿಸಿದೆ.

ಮಂಗಳವಾರ ಮಾಜಿ ಶಾಸಕ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್‌ನ 20 ಮಾಜಿ ಶಾಸಕರು ಸಭೆ ಸೇರಿ, ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಸೂಕ್ತ ಪ್ರಾತಿನಿಧ್ಯ ಇಲ್ಲವಾಗಿದೆ. ಇದರಿಂದ ಪಕ್ಷದ ಸಂಘಟನೆಯಲ್ಲಿ ಹಿನ್ನಡೆಯಾಗುತ್ತಿದೆ. ಹೀಗಾಗಿ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ ನಾಯಕರ ಯಾವೊಂದು ಕೆಲಸವು ಆಗುತ್ತಿಲ್ಲ. ಜೆಡಿಎಸ್ ಕಾಂಗ್ರೆಸಿಗರನ್ನು ಮಲತಾಯಿ ಮಕ್ಕಳಂತೆ ಕಾಣುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಕಾಂಗ್ರೆಸ್ ಕಾರ್ಯಕರ್ತರು ಆತ್ಮಸ್ಥೈರ್ಯ ಕಳೆದುಕೊಂಡು, ಪಕ್ಷ ಸಂಘಟನೆಗೆ ಹಿನ್ನಡೆಯಾಗಲಿದೆ ಎಂದು ಮಾಜಿ ಶಾಸಕ ಚೆಲುವರಾಯ ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ನಾಯಕರಿಗೆ ಯಾವುದೆ ಅಧಿಕಾರವಿಲ್ಲದೆ, ತಮ್ಮ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವುದು ಕಷ್ಟಕರವಾಗಿದೆ. ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹ ಕಳೆದುಕೊಂಡಿದ್ದಾರೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್‌ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News