ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿ ಮಾಜಿ ಸರಕಾರಿ ಉದ್ಯೋಗಿಗಳಿಂದ ಪತ್ರ

Update: 2018-12-18 17:37 GMT

ಹೊಸದಿಲ್ಲಿ,ಡಿ.18: ಡಿಸೆಂಬರ್ 3ರಂದು ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ನಡೆದ ಗುಂಪು ಹಿಂಸಾಚಾರದಲ್ಲಿ ಪೊಲೀಸ್ ನಿರೀಕ್ಷಕ ಸುಬೋಧ್ ಕುಮಾರ್ ಸಿಂಗ್ ತನ್ನ ಪ್ರಾಣವನ್ನು ಕಳೆದುಕೊಂಡಿರುವ ಬಗ್ಗೆ ಆಕ್ರೋಶ ಮತ್ತು ಆತಂಕ ವ್ಯಕ್ತಪಡಿಸಿರುವ ನಿವೃತ್ತ ಸರಕಾರಿ ಅಧಿಕಾರಿಗಳ ಗುಂಪು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ.

ಆದಿತ್ಯನಾಥ್ ಸಂವಿಧಾನದ ಆಶಯಗಳನ್ನು ರಕ್ಷಿಸುವಲ್ಲಿ ವಿಫಲವಾಗಿದ್ದಾರೆ ಎಂದು ಈ ಅಧಿಕಾರಿಗಳು ದೂರಿದ್ದಾರೆ. ಮುಖ್ಯ ಕಾರ್ಯದರ್ಶಿ, ಪೊಲೀಸ್ ಪ್ರಧಾನ ನಿರ್ದೇಶಕ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಸರಕಾರಿ ಸೇವೆಯಲ್ಲಿರುವ ಎಲ್ಲರೂ ತಮ್ಮ ರಾಜಕೀಯ ನಾಯಕರ ಸರ್ವಾಧಿಕಾರಿ ಧೋರಣೆಗಳಿಗೆ ಬಗ್ಗದೆ ನಿರ್ಭೀತರಾಗಿ ಕಾನೂನು ನಿಯಮಗಳನ್ನು ಅನುಷ್ಠಾನಗೊಳಿಸುವ ಅವರ ಸಾಂವಿಧಾನಿಕ ಕರ್ತವ್ಯವನ್ನು ನೆನಪಿಸುವ ಉದ್ದೇಶದಿಂದ ಈ ಪತ್ರವನ್ನು ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಂಗ್ ಹತ್ಯೆ ಪ್ರಕರಣವನ್ನು ಸ್ವಪ್ರೇರಿತವಾಗಿ ಕೈಗೆತ್ತಿಕೊಂಡು ಅದನ್ನು ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸುವ ಮೂಲಕ ಪ್ರಕರಣದ ನಿಜಾಂಶ, ರಾಜಕೀಯ ಸಂಬಂಧವನ್ನು ಬಯಲಿಗೆಳೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿವೃತ್ತ ಅಧಿಕಾರಿಗಳು ಅಲಹಾಬಾದ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News