ಹನೂರು ವಿಷ ಪ್ರಸಾದ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ವೃದ್ದೆ ಮೃತ್ಯು

Update: 2018-12-18 18:35 GMT

ಹನೂರು,ಡಿ.18: ತಾಲೂಕಿನ ಸೂಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ನಡೆದ ದುರ್ಘಟನೆಯಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಹಲವರ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಮಹಿಳೆಯನ್ನು ತಾಲೂಕಿನ ಮಲೈಮಹದೇಶ್ವರ ಬೆಟ್ಟದ ದುಂಡಮ್ಮ (55) ಎಂದು ಗುರುತಿಸಲಾಗಿದ್ದು, ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಇವರು ಶುಕ್ರವಾರ ತನ್ನ ಪುತ್ರಿಯ ಗ್ರಾಮವಾದ ಸುಳ್ವಾಡಿ ಗ್ರಾಮಕ್ಕೆ ತೆರಳಿ ನಂತರ ಪೂಜೆಗೆಂದು ಮಾರಮ್ಮನ ದೇವಸ್ಥಾನಕ್ಕೆ ಹೋಗಿ ಪ್ರಸಾದ ಸೇವಿಸಿ ನಂತರ ಅಸ್ವಸ್ಥರಾಗಿದ್ದರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News