ಬಿಎಂಟಿಸಿ ಬಸ್ ಢಿಕ್ಕಿ: ಯುವಕ ಮೃತ್ಯು

Update: 2018-12-19 12:59 GMT

ಬೆಂಗಳೂರು, ಡಿ.19: ಇತ್ತೀಚಿಗೆ ಬಿಎಂಟಿಸಿ ಬಸ್ ಹರಿದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಬೆನ್ನಲ್ಲೇ ಮತ್ತೊಂದು ಇಂತಹದ್ದೇ ಘಟನೆಯಿಂದ ಖಾಸಗಿ ಕಂಪೆನಿ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕೆಆರ್‌ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ನೌಕರನನ್ನು ಕಲ್ಯಾಣನಗರದ ನೌಶಾದ್(24) ಎಂದು ಪೊಲೀಸರು ಗುರುತಿಸಿದ್ದಾರೆ.

ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನೌಶದ್ ತನ್ನ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಕೆಆರ್ ಪುರಂ ಬಳಿಯ ನಾರಾಯಣಪುರದ ಮೂಲಕ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ನೌಶಾದ್ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ, ಕೆಆರ್ ಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ಹಸ್ತಾಂತರಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News