ಪ್ರಬಂಧ ಮಂಡನೆ: ದಿಲ್ಶಾನಾ ರಾಜ್ಯ ಮಟ್ಟಕ್ಕೆ ಆಯ್ಕೆ
Update: 2018-12-19 23:52 IST
ಪುತ್ತೂರು,ಡಿ.19: ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮಂಗಳೂರು ಇವರ ಆದೇಶದ ಮೇರೆಗೆ ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಇವರ ಮುಖಾಂತರ ಭಾವೀ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಸಲುವಾಗಿ ಮಂಗಳೂರು ಗಣಪತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕುಂಬ್ರ ಮರ್ಕಝುಲ್ ಹುದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಖದೀಜತ್ ದಿಲ್ಶಾನಾ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದಿಲ್ಶಾನಾ ಅವರು ರೆಂಜಲಾಡಿ ಬದ್ರಿಯಾ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಕೆ.ಎಂ ಹನೀಫ್ ರೆಂಜಲಾಡಿ ಮತ್ತು ಜಮೀಳಾ ದಂಪತಿ ಪುತ್ರಿ.