18 ಗ್ರಾಮಗಳಿಗೆ ಆಲಮಟ್ಟಿ ಜಲಾಶಯ ಮೂಲದಿಂದ ಕುಡಿಯುವ ನೀರು ಪೂರೈಕೆ: ಸಚಿವ ಸಂಪುಟ ಒಪ್ಪಿಗೆ

Update: 2018-12-19 18:35 GMT

ಬೆಳಗಾವಿ, ಡಿ.19: ಬಾದಾಮಿ, ಕೆರೂರು ಪಟ್ಟಣ ಹಾಗೂ ಮಾರ್ಗ ಮಧ್ಯದ 18 ಗ್ರಾಮಗಳಿಗೆ ಆಲಮಟ್ಟಿ ಜಲಾಶಯ ಮೂಲದಿಂದ ಶಾಶ್ವತವಾಗಿ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ. 

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. 220 ಕೋಟಿ ರೂ.ಗಳ ಈ ಯೋಜನೆಯನ್ನು ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯ ಅವರ ಮನವಿ ಮೇರೆಗೆ ರೂಪಿಸಲಾಗಿತ್ತು. 

ಬಾದಾಮಿ, ಕೆರೂರು ಹಾಗೂ ಆ ಭಾಗದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವವಿದೆ. ಈ ಹಿನ್ನಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು.

ಸಿದ್ದರಾಮಯ್ಯ ಅವರೂ ಯೋಜನೆ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ದೊರೆಯುವುದರೊಂದಿಗೆ ಬಾದಾಮಿ ಕ್ಷೇತ್ರದ ಜನರ ಹಲವಾರು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News