ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಬ್ಸಿಡಿ ನೀಡಲು ನೀತಿ ಆಯೋಗ ನಿರ್ಧಾರ

Update: 2018-12-19 18:43 GMT

ಬೆಂಗಳೂರು, ಡಿ.19: ವಿದ್ಯುತ್ ಚಾಲಿತ ವಾಹನಗಳನ್ನು ಉತ್ತೇಜಿಸುವ ಉದ್ದೇಶದಿಂದ ಹೊಸ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ 50 ಸಾವಿರ ರೂ.ಸಬ್ಸಿಡಿ ನೀಡಲು ನೀತಿ ಆಯೋಗ ನಿರ್ಧಾರ ಮಾಡಿದೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನೀತಿ ಆಯೋಗ ಹೊಸದಾಗಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ, ತ್ರಿಚಕ್ರ ಹಾಗೂ ಕಾರುಗಳನ್ನು ಖರೀದಿ ಮಾಡುವವರಿಗೆ 25 ರಿಂದ 50 ಸಾವಿರದವರೆಗೂ ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ.

ವಿದ್ಯುತ್ ಚಾಲಿತ ವಾಹನ ಖರೀದಿದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನೀತಿ ಆಯೋಗದ ಸಭೆಯಲ್ಲಿ ಚರ್ಚೆ ನಡೆದಿದ್ದು, 2030ರ ವೇಳೆಗೆ ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಹಾಗೂ ಮಾರಾಟವನ್ನು ಹೆಚ್ಚಳಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News