ಪಡಿತರ ಚೀಟಿ: ಆದಾಯ, ಜಾತಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ಉಡುಪಿ, ಡಿ.20: ಉಡುಪಿ ಜಿಲ್ಲೆಯಲ್ಲಿ ಹೊಸ ಪಡಿತರ ಚೀಟಿ ವಿತರಿಸಲು ಬಾಕಿ ಇರುವ ಆನ್‌ಲೈನ್ ಬಿಪಿಎಲ್ ಅರ್ಜಿಗಳ ಚೆಕ್ ಲೀಸ್ಟ್ ತೆಗೆದು ಗ್ರಾಮ ಕರಣಿಕರ ತನಿಖೆಗೆ ನೀಡಲಾಗಿದೆ. 2017ರಲ್ಲಿ ಅರ್ಜಿ ಸಲ್ಲಿಸುವಾಗ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಸಲ್ಲಿಸದವರು ಅರ್ಜಿ ವಿಲೇವಾರಿ ಮಾಡಲು ಆದಾಯ ಮತ್ತು ಜಾತಿ ಪ್ರಮಾಣ ಪತ್ರ ನೀಡಬೇಕಾಗಿದೆ.
2017ರಲ್ಲಿ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರು ಹೊಸ ಪಡಿತರ ಚೀಟಿ ಸಿಗದೇ ಇದ್ದಲ್ಲಿ ಕುಟುಂಬದ ಯಾವುದಾದರೂ ಒಬ್ಬ ಸದಸ್ಯನ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಹಾಗೂ ಕಾರ್ಡಿಗೆ ಅರ್ಜಿ ಸಲ್ಲಿಸಿದ ಸ್ವೀಕೃತಿಯನ್ನು ಸಂಬಂಧಿಸಿದ ಗ್ರಾಮ ಕರಣಿಕರಿಗೆ ನೀಡುವಂತೆ ತಿಳಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ಇದರ ನಂತರ ಈ ಅರ್ಜಿಗಳನ್ನು ಅನುಮೋದಿಸಲಾಗುತ್ತದೆ. ಅರ್ಜಿ ಅನುಮೋದನೆಯ ನಂತರ ಕಾರ್ಡು ಮುದ್ರಿಸಿ ಅರ್ಜಿದಾರರ ವಿಳಾಸಕ್ಕೆ ಕಳುಹಿಸಲಾಗುತ್ತದೆ.
ಹೆಚ್ಚಿನ ವಿವರಗಳನ್ನು ಸಂಬಂಧಿಸಿದ ತಾಲೂಕು ಕಚೇರಿ ಆಹಾರ ನಿರೀಕ್ಷಕ ರಿಂದ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.