ಡಿ.21: ಉಡುಪಿ ಎಸ್ಪಿ ಫೋನ್ ಇನ್
Update: 2018-12-20 22:07 IST
ಉಡುಪಿ, ಡಿ. 20: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬ.ನಿಂಬರ್ಗಿ ಅವರ ನೇರ ಫೋನ್-ಇನ್ ಕಾರ್ಯಕ್ರಮವು ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಿ.21ರಂದು ಬೆಳಗ್ಗೆ 10ಗಂಟೆಯಿಂದ 11ಗಂಟೆಯ ವರೆಗೆ ನಡೆಯಲಿದೆ.
ಸಾರ್ವಜನಿಕರು ಸ್ಥಿರ ದೂರವಾಣಿ ಸಂಖ್ಯೆ: 0820-2534777ಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳು ಅಥವಾ ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧ ಪಟ್ಟ ಸಲಹೆಗಳು ಅಥವಾ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿಗಳನ್ನು ನೀಡಬಹುದಾಗಿದೆ. ಕರೆ ಮಾಡಿದವರ ವಿವರವನ್ನು ಗುಪ್ತವಾಗಿ ಇಡಲಾಗು ವುದು ಎಂದು ಪ್ರಕಟಣೆ ತಿಳಿಸಿದೆ.