ಹನೂರು: ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಪೌಲ್ ರಾಜ್ ಆಯ್ಕೆ
Update: 2018-12-20 23:13 IST
ಹನೂರು,ಡಿ.20: ತಾಲೂಕಿನ ಮಾರ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ ನೂತನ ಅಧ್ಯಕ್ಷರಾಗಿ ಎಂ.ಪೌಲ್ ರಾಜ್ ಆಯ್ಕೆಯಾಗಿದ್ದಾರೆ.
ಈ ಹಿಂದೆ ಸಂಘಕ್ಕೆ ಎಂ.ಪೌಲ್‍ರಾಜ್ ಅಧ್ಯಕ್ಷರಾಗಿದ್ದರು. ಆದರೆ ವೈಯಕ್ತಿಕ ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಬಳಿಕ ಇಂದು ನಡೆದ ಚುನಾವಣೆಯಲ್ಲಿ ಎಂ.ಪೌಲ್‍ರಾಜ್ ಅವರೇ ಗೆಲುವು ಸಾಧಿಸಿದರು.
ಚುನಾವಣಾ ಅಧಿಕಾರಿಗಳಾಗಿ ಸಹಕಾರ ಇಲಾಖೆಯ ನಂಜುಂಡೇಗೌಡ, ಎಂಡಿಸಿಸಿ ಬ್ಯಾಂಕ್‍ನ ರಾಚಪ್ಪ, ಸಿಇಒ ಹುಚ್ಚಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.