ಮಂಗಳೂರು: ಬ್ಯಾಂಕ್ ಸಿಬ್ಬಂದಿಗಳಿಂದ ಪ್ರತಿಭಟನೆ
Update: 2018-12-21 11:33 IST
ಮಂಗಳೂರು, ಡಿ. 21: ವೇತನ ಪರಿಷ್ಕರಣೆ ಮತ್ತು ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ವಿಲೀನವನ್ನು ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು ಇದನ್ನು ಬೆಂಬಲಿಸಿ ಮಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಮಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬ್ಯಾಂಕ್ ಸಿಬ್ಬಂದಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.