ಪುತ್ತೂರು: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
Update: 2018-12-21 16:31 IST
ಪುತ್ತೂರು, ಡಿ. 21: ಕೆದಿಲ ಗ್ರಾಮದ ಕರಿಮಜಲು ನಿವಾಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.
ಇಲ್ಲಿನ ಕಂಪ ನಿವಾಸಿ ಪಿಡಬ್ಲ್ಯೂಡಿ ಗುತ್ತಿಗೆದಾರ ಮಾರ್ಷಲ್ ಪಾಯಸ್ ಎಂಬವರ ಪುತ್ರ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಪರ್ವೀನ್ ಪಾಯಸ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಅವರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಈರ್ವರು ಸಹೋದರಿಯರನ್ನು ಅಗಲಿದ್ದಾರೆ. ಮೃತರ ತಂದೆ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.