×
Ad

ಇಸ್ಪೀಟ್ ಕ್ಲಬ್ ಮೇಲೆ ಸಿಸಿಬಿ ದಾಳಿ: 38 ಮಂದಿಯ ಬಂಧನ, 1.59 ಲಕ್ಷ ರೂ. ನಗದು ಜಪ್ತಿ

Update: 2018-12-21 20:16 IST

ಬೆಂಗಳೂರು, ಡಿ.21: ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಇಸ್ಪೀಟ್ ಕ್ಲಬ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 38 ಜನರನ್ನು ಬಂಧಿಸಿ, 1.59 ಲಕ್ಷ ರು. ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನಗರ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಗೊರಗುಂಟೆ ಪಾಳ್ಯ ರಿಂಗ್ ರಸ್ತೆ, ರಿಲಯನ್ಸ್ ಪೆಟ್ರೋಲ್ ಬಂಕ್ ಹತ್ತಿರದ ಆರೇಂಜ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್‌ನಲ್ಲಿ ಕಾನೂನು ಬಾಹಿರ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News