ಡಿ. 22 ರಂದು ಪುದು ಮಾಪ್ಲ ಶಾಲೆಯಲ್ಲಿ ವಾರ್ಷಿಕೋತ್ಸವ
Update: 2018-12-21 22:33 IST
ಫರಂಗಿಪೇಟೆ, ಡಿ. 21: ತಾಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿರುವ ಪುದು ಮಾಪ್ಲ ಶಾಲೆಯಲ್ಲಿ ಡಿ. 22 ರಂದು ಟುಡೇ ಯೂತ್ ಫೆಡರೇಶನ್ ಇದರ ಸಹಭಾಗಿತ್ವದಲ್ಲಿ ಶಾಲಾ ವಾರ್ಷಿಕೋತ್ಸವ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಶಾಲಾ ಮೈದಾನದಲ್ಲಿ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು ಬಳಿಕ ವಿದ್ಯಾರ್ಥಿಗಳಿಮದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಹಾಗೂ ರಾಜಕೀಯ, ಸಾಮಾಜಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಟುಡೇ ಯೂತ್ ಫೆಡರೇಶನ್ ಅಧ್ಯಕ್ಷ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಫ್ ಉಮರ್ ಫಾರೂಕು ತಿಳಿಸಿದ್ದಾರೆ.