ಸಂಪುಟ ವಿಸ್ತರಣೆಯಲ್ಲಿ ರಮೇಶ್ ಜಾರಕಿಹೊಳಿಗೆ ಸ್ಥಾನವಿಲ್ಲ: ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ..

Update: 2018-12-22 14:09 GMT

ಬೆಂಗಳೂರು, ಡಿ.22: ಕಾಂಗ್ರೆಸ್ ಸಂಪುಟ ಪುನರ್ ರಚನೆಯಿಂದ ಅಸಮಾಧಾನ ಭುಗಿಲೇಳಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶನಿವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಭಾವಿ ನಾಯಕ ರಮೇಶ್ ಜಾರಕಿಹೋಳಿ ಕೈಬಿಟ್ಟಿದ್ದರಿಂದ ಸಾಕಷ್ಟು ಪರಿಣಾಮ ಬೀರಲಿದೆ. ನಾವು 104 ಜನ ವಿರೋಧ ಪಕ್ಷದಲ್ಲಿದ್ದು, ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಶೀಘ್ರದಲ್ಲಿಯೇ ಬಿಜೆಪಿ ಶಾಸಕಾಂಗ ಸಭೆ ಕರೆಯುತ್ತೇನೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರಕಾರದ ದೋಷ ಎತ್ತಿ ತೋರಿಸಿದ್ದೇವೆ. ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ಬರಗಾಲದ ಬಗ್ಗೆ ವ್ಯಾಪಕ ಚರ್ಚೆ ಮಾಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬರಗಾಲ ಅಧ್ಯಯನ ಪ್ರವಾಸ ಮಾಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News