×
Ad

ಕಾಪು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2018-12-22 21:56 IST

ಕಾಪು, ಡಿ. 22: ಕಾಪುವಿನ ಸಾರ್ವಜನಿಕ ಶೌಚಾಲಯದ ಬಳಿ 30ರಿಂದ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ಡಿ. 22ರಂದು ಬೆಳಗ್ಗೆ ಪತ್ತೆಯಾಗಿದೆ.

ಈ ವ್ಯಕ್ತಿ ಡಿ.21ರಂದು ರಾತ್ರಿ ವಿಪರೀತ ಮದ್ಯ ಸೇವಿಸಿ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಅಲ್ಲಿಯೇ ಇದ್ದ ಇಟ್ಟಿಗೆಯ ಮೇಲೆ ಬಿದ್ದ ಪರಿಣಾಮ ತಲೆಯಿಂದ ವಿಪರೀತ ರಕ್ತ ಸುರಿದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News