ಮಂಗಳೂರು ಪುರಭವನದಲ್ಲಿ ದ.ಕ. ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನ
Update: 2018-12-23 17:29 IST
ಮಂಗಳೂರು, ಡಿ.23: ದ.ಕ. ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜನವರಿ ಕೊನೆಯ ವಾರದಲ್ಲಿ ನಡೆಸಲು ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತಿರ್ಮಾನಿಸಲಾಗಿದೆ. 3 ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಯೋಜಿಸಲಾಗುವುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ. ತಮ್ಮಯ್ಯ, ಡಾ.ಶ್ರೀನಾಥ್ ಉಜಿರೆ, ಮಂಗಳೂರು ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ, ಪುತ್ತೂರು ತಾಲೂಕು ಅಧ್ಯಕ್ಷ ಡಾ.ಬಿ.ಐತಪ್ಪ ನಾಯ್ಕ, ಬಂಟ್ವಾಳ ತಾಲೂಕು ಅಧ್ಯಕ್ಷ ಕೆ. ಮೋಹನ ರಾವ್, ಮಹಿಳಾ ಪ್ರತಿನಿಧಿ ಲೀಲಾ ದಾಮೋದರ್, ಸಂಘ ಸಂಸ್ಥೆಗಳ ಪ್ರತಿನಿಧಿ ಜಾನ್ ಚಂದ್ರನ್ ಉಪಸ್ಥಿತರಿದ್ದರು.