×
Ad

ಉಡುಪಿ: ಅರಣ್ಯ ರಕ್ಷಕರ, ವೀಕ್ಷಕರ ಸಂಘದ ಡೈರಿ ಬಿಡುಗಡೆ

Update: 2018-12-23 22:08 IST

ಉಡುಪಿ, ಡಿ.23: ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ, ನಿವೃತ್ತ ನೌಕರರಿಗೆ ಸನ್ಮಾನ, ಅಭಿನಂದನೆ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉಡುಪಿಯ ಕಿದಿಯೂರು ಹೋಟೆಲ್‌ನ ಪವನ್ ರ್ೂಟಾಪ್‌ನಲ್ಲಿ ರವಿವಾರ ಆಯೋಜಿಸ ಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಲಾಖೆಯ ನೌಕರರು ನ್ಯಾಯವಾಗಿ ಸಿಗಬೇಕಾದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ವಾಡಲಾಗುವುದು ಎಂದು ಹೇಳಿದರು.

ಮಂಗಳೂರು ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಎಸ್.ನೆಟಾಲ್ಕರ್, ನಿವೃತ್ತ ಉಪಅರಣ್ಯ ಸಂರಕ್ಷಣಾಧಿಕಾರಿ ರವಿರಾಜ ನಾರಾ ಯಣ್ ಎಂ., ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಲೋಹಿತ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆ ಗಾರ್, ಅರಣ್ಯ ರಕ್ಷಕ ವೀಕ್ಷಕರ ಸಂಘದ ಗೌರವಾಧ್ಯಕ್ಷ ಎಚ್.ದೇವರಾಜ ಪಾಣ, ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಸವಿತಾ ದೇವಾಡಿಗ, ಸಂಘದ ಸಲಹೆಗಾರ ವಿ.ಮಂಜು, ಸಂಘದ ದ.ಕ. ಜಿಲ್ಲಾಧ್ಯಕ್ಷ ಜಗದೀಶ, ರಾಜ್ಯ ಕಾರ್ಯದರ್ಶಿ ರಾಜು ಚೌಹಾಣ್, ಮೂಡಬಿದಿರೆ ವಲಯ ಅರಣ್ಯಾಧಿಕಾರಿ ಪ್ರಕಾಶ ಪೂಜಾರಿ, ಪದಾಧಿಕಾರಿಗಳಾದ ರಮೇಶ ಬಿ., ಬಸಪ್ಪ ಹಲಗೇರ, ಪರಶುರಾಮ ಮೇಟಿ, ಶ್ರುತಿ ಶೇಖರ ಗೌಡ, ಅಭಿಲಾಶ್ ಎಸ್.ಬಿ. ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಗಣಪತಿ ನಾಯ್ಕ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇಶವ ಪೂಜಾರಿ ಸ್ವಾಗತಿಸಿದರು. ಪ್ರಶಾಂತ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News