​ಸಚಿವ ಸ್ಥಾನವೇ ಹೋಯ್ತು, ಇನ್ನು ಶಾಸಕ ಸ್ಥಾನ ಯಾಕೆ ಬೇಕು: ರಮೇಶ್ ಜಾರಕಿಹೊಳಿ

Update: 2018-12-23 17:24 GMT

ಬೆಳಗಾವಿ, ಡಿ.23: ಸಚಿವ ಸ್ಥಾನವೇ ಹೋಯ್ತು, ಇನ್ನು ಶಾಸಕ ಸ್ಥಾನ ಯಾಕೆ ಬೇಕು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಾನು ಏನು ಎನ್ನುವುದನ್ನು ಕಾಂಗ್ರೆಸ್ ಮುಖಂಡರಿಗೆ ತೋರಿಸುತ್ತೇನೆ ಎನ್ನುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ರವಾನಿಸಿದ್ದಾರೆ.

ಸಚಿವ ಸ್ಥಾನದಿಂದ ಕೈಬಿಟ್ಟ ವಿಚಾರವಾಗಿ ಆಪ್ತವಲಯದಲ್ಲಿ ಅಸಮಾಧಾನ ಹೊರ ಹಾಕಿರುವ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನವೇ ಹೋಯ್ತು, ಇನ್ನು ಶಾಸಕ ಸ್ಥಾನ ಯಾಕೆ ಬೇಕು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಾನು ಏನು ಎನ್ನುವುದನ್ನು ಕಾಂಗ್ರೆಸ್ ಮುಖಂಡರಿಗೆ ತೋರಿಸುತ್ತೇನೆ ಎನ್ನುವ ಮೂಲಕ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ನನ್ನೊಂದಿಗೆ ಎಷ್ಟು ಮಂದಿ ಶಾಸಕರಿದ್ದಾರೆ ಅನ್ನೊಂದನ್ನು ಈಗ ಹೇಳಲ್ಲ. ಒಂದು ವಾರ ಕಾದು ನೋಡಿ, ಎರಡು ಮೂರು ದಿನಗಳಲ್ಲಿ ರಾಜೀನಾಮೆ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಮ್ಮ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ರಮೇಶ್ ಜಾರಕಿಹೊಳಿಯನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಪರಿಷತ್ ಸದಸ್ಯ ವಿವೇಕ್ ರಾವ್ ಪಾಟೀಲ್ ಸೇರಿದಂತೆ, ಹಲವು ಮುಖಂಡರು ರಮೇಶ್ ಜಾರಕಿಹೊಳಿ ಯಾವ ನಿರ್ಧಾರ ಕೈಗೊಂಡರೂ ನಮ್ಮ ಬೆಂಬಲವಿರುತ್ತದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಇವೆಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್, ರಮೇಶ್ ಜಾರಕಿಹೊಳಿಯನ್ನು ಸಮಾಧಾನ ಪಡಿಸುವ ಹೊಣೆಯನ್ನು ಸಿದ್ದರಾಮಯ್ಯ ಹೆಗಲಿಗೆ ಹಾಕಿದೆ ಎನ್ನಲಾಗುತ್ತಿದೆ.

ಹಾಳು ಮಾಡಿದ್ದೇ ನೀವು

ಗೋಕಾಕ್ ಫಾಲ್ಸ್‌ನ ಬ್ಯಾಡ್ಮಿಂಟನ್ ಹಾಲ್‌ನಲ್ಲಿ ಒಂದು ಗಂಟೆ ಆಟ ಆಡಿ ದಣಿವಾರಿಸಿಕೊಳ್ಳುತ್ತಿದ್ದಾಗ, ಸಚಿವ ಸ್ಥಾನ ಕೈ ತಪ್ಪಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, ರಮೇಶ್ ಜಾರಕಿಹೊಳಿ, ನಿಮ್ಮಿಂದಲೇ ಎಲ್ಲ ಹಾಳಾಗಿದ್ದು ಎಂದು ಹರಿಹಾಯ್ದರಲ್ಲದೆ, ಪ್ರತಿಕ್ರಿಯೆ ನೀಡಲು ನಿರಾಕರಿಸಿದರೆಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News