ಅಫ್ಘಾನ್‌ನಿಂದ ಅಮೆರಿಕ ಸೇನಾ ವಾಪಸಾತಿ: ಪಾಕಿಸ್ತಾನ ಸ್ವಾಗತ

Update: 2018-12-23 18:22 GMT

ಮುಲ್ತಾನ್ (ಪಾಕಿಸ್ತಾನ), ಡಿ. 23: ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆಯ ಅರ್ಧ ಭಾಗವನ್ನು ವಾಪಸ್ ಕರೆಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರವನ್ನು ಪಾಕಿಸ್ತಾನದ ವಿದೇಶ ಸಚಿವ ಶಾ ಮಹ್ಮೂದ್ ಕುರೇಶಿ ಸ್ವಾಗತಿಸಿದ್ದಾರೆ.

ಅಮೆರಿಕ ಅಧ್ಯಕ್ಷರು ತೆಗೆದುಕೊಂಡಿರುವ ಈ ನಿರ್ಧಾರವು, ಅಫ್ಘಾನ್ ತಾಲಿಬಾನ್ ಮತ್ತು ಅಮೆರಿಕ ನಡುವೆ ಈಗ ನಡೆಯುತ್ತಿರುವ ಶಾಂತಿ ಮಾತುಕತೆಗಳಿಗೆ ಪೂರಕವಾಗಿದೆ ಎಂದು ಮುಲ್ತಾನ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಪ್ರಾಯಪಟ್ಟರು.

ಅಬುಧಾಬಿಯಲ್ಲಿ ಕಳೆದ ವಾರ ಅಮೆರಿಕ ಮತ್ತು ತಾಲಿಬಾನ್ ನಡುವೆ ನಡೆದ ಶಾಂತಿ ಮಾತುಕತೆಯನ್ನು ಪಾಕಿಸ್ತಾನ ಸ್ವಾಗತಿಸುತ್ತದೆ ಹಾಗೂ ಅಫ್ಘಾನ್ ಶಾಂತಿ ಪ್ರಕ್ರಿಯೆಗೆ ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ ಎಂದು ಕುರೇಶಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News