ನ್ಯೂಪಡ್ಪು: ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ನಿಂದ ರಕ್ತದಾನ ಶಿಬಿರ

Update: 2018-12-24 06:57 GMT

ಕೊಣಾಜೆ, ಡಿ.24: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಬ್ಲಡ್ ಸೈಬೊ ಪ್ರಾಯೋಜಕತ್ವದಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಹಾಗೂ ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ವತಿಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ನ್ಯೂಪಡ್ಪುವಿನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರವನ್ನು ಅಕ್ಷರ ಸಂತ ಹಾಜಬ್ಬ ಹರೇಕಳ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಅಧ್ಯಕ್ಷ ಜಲೀಲ್ ಫರೀದ್ ನಗರ ಅಧ್ಯಕ್ಷತೆ ವಹಿಸಿದ್ದರು.
ನ್ಯೂಪಡ್ಪು ಜುಮಾ ಮಸ್ಜಿದ್ ಖತೀಬ್ ಖಾಲಿದ್ ಮದನಿ ಕಲ್ಮಿಂಜ ದುಆಗೈದರು.

ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ,ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸದಸ್ಯ ಸೈಯದ್ ಖುಬೈಬ್ ತಂಙಳ್, ವೆನ್ಲಾಕ್ ಆಸ್ಪತ್ರೆಯ ವೈದ್ಯ ಆ್ಯಂಟನಿ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್, ಹರೇಕಳ ಗ್ರಾಮ ಪಂಚಾಯತ್ ಸದಸ್ಯ ಸತ್ತಾರ್ ನ್ಯೂಪಡ್ಪು, ತ್ವಾಹಾ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ನ್ಯೂಪಡ್ಪು, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಬ್ಲಡ್ ಸೈಬೊ ಉಸ್ತುವಾರಿ ಇಲ್ಯಾಸ್ ಪೊಟ್ಟೊಳಿಕೆ ಹಾಗೂ ಹಕೀಂ ಪೂಮಣ್ಣ್, ಮುನೀರ್ ರಾಜಗುಡ್ಡೆ, ಉಬೈದ್ ಫರೀದ್ ನಗರ, ಅಬೂಸ್ವಾಲಿಹ್ ಹರೇಕಳ ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಕೊಣಾಜೆ  ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ ನಗರ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News