ಮುಂದಿನ ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಕುಮಾರಸ್ವಾಮಿ
Update: 2018-12-24 21:22 IST
ವಿಜಯಪುರು, ಡಿ.24: ಮುಂದಿನ ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸೋಮವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ವಿಜಯಪುರಕ್ಕೆ ಆಗಮಿಸಿದ ವೇಳೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ನಂತರ ಮಾತನಾಡಿದ ಅವರು, ರಾಜ್ಯ ಸರಕಾರ ಕೋಮಾದಲ್ಲಿದೆ, ಕುಮಾರಸ್ವಾಮಿ ಉತ್ತರ ಕರ್ನಾಟಕ ವಿರೋಧಿ ಎಂದು ವಿರೋಧ ಪಕ್ಷ ಬಿಂಬಿಸುತ್ತಿದೆ. ಆದರೆ, ಸಮ್ಮಿಶ್ರ ಸರಕಾರ ಅಭಿವೃದ್ಧಿಗೆ ಬದ್ಧವಾಗಿದೆ. ಒಂದೇ ರಾತ್ರಿ ಎಲ್ಲವನ್ನು ಸರಿಪಡಿಸಲಾಗದು ಎಂದು ಹೇಳಿದರು.
ಆಲಮಟ್ಟಿ ಎತ್ತರ ಕುರಿತು ಮಾತನಾಡಿದ ಅವರು, ಅದಕ್ಕೆ ಇಟ್ಟಿದ್ದ ಹಣ ಈಗ ದುಪ್ಪಟ್ಟಾಗಿದೆ. ಮುಂದಿನ ಬಜೆಟ್‌ನಲ್ಲಿ ನೀರಾವರಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಇನ್ನು ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಭಿನ್ನಮತವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತಾರೆ. ಅಲ್ಲದೆ, ಬಾಕಿ ಉಳಿದಿರುವ ರೈತರ ಸಾಲವನ್ನು ಹಂತ ಹಂತವಾಗಿ ಮನ್ನಾ ಮಾಡಲಾಗುವುದು ಎಂದು ತಿಳಿಸಿದರು.