×
Ad

'ಕೊಲೆಗಡುಕರನ್ನು ನಿರ್ದಯವಾಗಿ ಶೂಟೌಟ್ ಮಾಡಿ' ಎಂಬ ಹೇಳಿಕೆ: ಸ್ಪಷ್ಟನೆ ನೀಡಿದ ಸಿಎಂ ಕುಮಾರಸ್ವಾಮಿ

Update: 2018-12-24 22:57 IST

ಬೆಂಗಳೂರು,ಡಿ.24: 'ಜೆಡಿಎಸ್ ಕಾರ್ಯಕರ್ತನ ಕೊಲೆ ಮಾಡಿದ ಹಂತಕನನ್ನು ನಿರ್ದಯವಾಗಿ ಶೂಟೌಟ್ ಮಾಡಿ' ಎಂಬ ತನ್ನ ಹೇಳಿಕೆ ಬಗ್ಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಇದು ಭಾವನಾತ್ಮಕ ಪ್ರತಿಕ್ರಿಯೆಯೇ ಹೊರತು, ಆದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆಂದು 'ಸಿಎಂ ಆಫ್ ಕರ್ನಾಟಕ' ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

'ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಕಾನೂನು ಪ್ರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ಬಳಸಿದ ಪದ ಭಾವನಾತ್ಮಕ ಪ್ರತಿಕ್ರಿಯೆಯೇ ಹೊರತು, ಆದೇಶವಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮದ್ದೂರು ಜೆಡಿಎಸ್ ಮುಖಂಡ‌ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ "ನನಗೆ ಇದರಿಂದ ಡಿಸಪಾಯಿಂಟ್ (ನಿರಾಶೆ) ಆಗಿದೆ. ಅಂತಹವನನ್ನು ಯಾವುದೇ ಕಾರಣಕ್ಕೂ ಬಿಡಬೇಡಿ. ನೀವು ಏನು ಮಾಡ್ತೀರೋ ಗೊತ್ತಿಲ್ಲ. ಅಂತಹವರನ್ನು ಮರ್ಸಿಲೆಸ್ (ನಿರ್ದಯ) ಆಗಿ ಶೂಟ್ ಮಾಡಿ ಎಂದು ಕುಮಾರಸ್ವಾಮಿ ಹೇಳಿದ್ದ ವೀಡಿಯೋ ವೈರಲ್ ಆಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News