ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ಜಾವೇದ್ ನಿವೃತ್ತಿ
Update: 2018-12-24 23:47 IST
ದುಬೈ, ಡಿ.24: ಯುಎಇ ಕ್ರಿಕೆಟ್ ತಂಡದ ಮಾಜಿ ನಾಯಕ ಅಮ್ಝದ್ ಜಾವೇದ್ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಎಮಿರೇಟ್ಸ್ ಏರ್‌ಲೈನ್ಸ್‌ನಲ್ಲಿ ಹಮಾಲಿಯಾಗಿ ವೃತ್ತಿ ಆರಂಭಿಸಿದ್ದ ಅವರು, 15 ಏಕದಿನ ಹಾಗೂ 22 ಟಿ20 ಪಂದ್ಯಗಳಲ್ಲಿ ಯುಎಇ ರಾಷ್ಟ್ರೀಯ ತಂಡವನ್ನು ಮುನ್ನಡೆಸಿದ್ದರು.
ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿರುವ 38 ವರ್ಷ ವಯಸ್ಸಿನ ಜಾವೇದ್, 2017ರ ಡಿಸೆಂಬರ್‌ನಲ್ಲಿ ಕೊನೆಯ ಲಿಸ್ಟ್ ಎ ಪಂದ್ಯವನ್ನು ನೇಪಾಳದ ವಿರುದ್ಧ ಆಡಿದ್ದರು.
ನ್ಯೂಝಿಲೆಂಡ್‌ನಲ್ಲಿ ನಡೆದ 2014ರ ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಕೀನ್ಯಾ ವಿರುದ್ಧ ಅವರ ಉತ್ತಮ ಪ್ರದರ್ಶನ ಮೂಡಿಬಂದಿತ್ತು. ಕೇವಲ 31 ಎಸೆತಗಳಲ್ಲಿ 63 ರನ್ ಚಚ್ಚಿದ್ದಲ್ಲದೆ ಎರಡು ವಿಕೆಟ್‌ಗಳನ್ನೂ ಪಡೆದಿದ್ದರು.