ರಾಮಲಿಂಗಾರೆಡ್ಡಿ ಮನೆಗೆ ಬಿಜೆಪಿ ಶಾಸಕ ಭೇಟಿ

Update: 2018-12-25 13:56 GMT

ಬೆಂಗಳೂರು, ಡಿ.25: ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ನಿವಾಸಕ್ಕೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿದರು.

ಮಂಗಳವಾರ ಬೆಳಗ್ಗೆ ನಗರದ ರಾಮಲಿಂಗಾರೆಡ್ಡಿ ಅವರ ನಿವಾಸದಲ್ಲಿ ಎಸ್.ಆರ್.ವಿಶ್ವನಾಥ್ ಭೇಟಿಯಾಗಿದ್ದರು. ಬಿಜೆಪಿ ಶಾಸಕರ ದಿಢೀರ್ ಭೇಟಿ ಸಾಕಷ್ಟು ಕುತೂಹಲ ಹುಟ್ಟು ಹಾಕಿತ್ತು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ವಿಶ್ವನಾಥ್ ನಮ್ಮ ಮನೆಗೆ ಬಂದಿದ್ದು ನಿಜ. ಅವರ ಮಗನ ಮದುವೆಗೆ ಆಮಂತ್ರಣ ನೀಡಲು ಬಂದಿದ್ದಾರೆ. ರಾಜಕೀಯ ವಿಚಾರದ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News