ಡಿ.26 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ದಿಲ್ಲಿಗೆ: ಕೇಂದ್ರ ಸಚಿವರೊಂದಿಗೆ ಚರ್ಚೆ

Update: 2018-12-25 17:14 GMT

ಬೆಂಗಳೂರು, ಡಿ.25: ಮಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಡಿ.26 ಮತ್ತು 27 ರಂದು ದಿಲ್ಲಿಗೆ ಭೇಟಿ ನೀಡಲಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ.  

ಡಿ.26 ರಂದು ಕೇಂದ್ರ ಜಲಸಂಪನ್ಮೂಲ, ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದ  ಹೆದ್ದಾರಿ ಹಾಗೂ ನೀರಾವರಿ ಯೋಜನೆಗಳ ಬಗ್ಗೆ ಮಾತುಕತೆ ನಡೆಸುವರು. ಡಿ. 27 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿಯಾಗಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಮನವಿ ಸಲ್ಲಿಸುವರು.

ಹಾಗೂ ಕೇಂದ್ರ ರೈಲ್ವೆ ಹಾಗೂ ಕಲ್ಲಿದ್ದಲು ಖಾತೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯದ  ಕಲ್ಲಿದ್ದಲು ಬಗ್ಗೆ ಚರ್ಚಿಸುವರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News