ಮೂರನೇ ಟೆಸ್ಟ್: ಉತ್ತಮ ಮೊತ್ತದತ್ತ ಭಾರತ

Update: 2018-12-26 07:34 GMT

ಮೆಲ್ಬೋರ್ನ್, ಡಿ.26: ಭಾರತ ಕ್ರಿಕೆಟ್ ತಂಡ ಬುಧವಾರ ಇಲ್ಲಿ ಆರಂಭವಾದ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನ 89 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿದೆ.

ಚೇತೇಶ್ವರ ಪೂಜಾರ(ಔಟಾಗದೆ 68,200 ಎಸೆತ,6 ಬೌಂಡರಿ)ಹಾಗೂ ನಾಯಕ ವಿರಾಟ್ ಕೊಹ್ಲಿ(ಔಟಾಗದೆ 47,107 ಎಸೆತ, 6 ಬೌಂಡರಿ)3ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 92 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸುತ್ತಿದ್ದಾರೆ.

ಎಂಸಿಜಿಯಲ್ಲಿ ಟಾಸ್ ಜಯಿಸಿದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಹನುಮ ವಿಹಾರಿ(8) ಹಾಗೂ ಮಾಯಾಂಕ್ ಅಗರ್ವಾಲ್(76,161 ಎಸೆತ, 8 ಬೌಂಡರಿ, 1 ಸಿಕ್ಸರ್)ಮೊದಲ ವಿಕೆಟ್‌ಗೆ 40 ರನ್ ಸೇರಿಸಿ ಸಾಧಾರಣ ಆರಂಭ ನೀಡಿದರು.

ಚೊಚ್ಚಲ ಪಂದ್ಯವನ್ನಾಡಿದ ಕರ್ನಾಟಕದ ಮಾಯಾಂಕ್ ಆಕರ್ಷಕ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಆಸೀಸ್ ನೆಲದಲ್ಲಿ ತನ್ನ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ಆರಂಭಿಕ ಆಟಗಾರನೆಂಬ ಕೀರ್ತಿಗೆ ಭಾಜನರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News