ಅಶೋಕ ಜ್ಯುವೆಲ್ಲರ್ಸ್ ಮಾಲಕ ಉಪೇಂದ್ರ ಆಚಾರ್ ನಿಧನ
Update: 2018-12-26 19:28 IST
ಪುತ್ತೂರು, ಡಿ. 26: ಅಶೋಕ ಜ್ಯುವೆಲ್ಲರ್ಸ್ ಮಾಲಕರಾದ ಬಿ. ಉಪೇಂದ್ರ ಆಚಾರ್ (75) ಅಲ್ಪ ಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
ಪುತ್ತೂರು ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷರಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಪುತ್ತೂರು ವಿಶ್ವಕರ್ಮ ಯುವ ಸಮಾಜ ಮತ್ತು ವಿಶ್ವಕರ್ಮ ಮಹಿಳಾ ಮಂಡಳಿ ಬೊಳುವಾರು ಪುತ್ತೂರು ಇದರ ಸಲಹಾ ಸಮಿತಿ ಸದಸ್ಯರಾಗಿ, ಮಂಗಳೂರಿನ ಶ್ರೀಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪುತ್ತೂರು ಪೇಟೆಯ ಸಂಚಾಲಕರಾಗಿ, ಪುತ್ತೂರು ಜ್ಯುವೆಲ್ಲರ್ಸ್ ಅಸೋಸಿಯೇಶನ್ ಇದರ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.