ಇನ್ನು ಮುಂದೆ ಚಾಮುಂಡಿ ಬೆಟ್ಟದ ದೇಗುಲದಲ್ಲಿ ಮೊಬೈಲ್ ನಿರ್ಬಂಧ

Update: 2018-12-26 16:27 GMT

ಮೈಸೂರು,26: ಮೊಬೈಲ್ ಬಳಕೆಯಿಂದ ಕಿರಿಕಿರಿ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ದೇಗುಲದಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ. ಇನ್ನು ಮುಂದೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಹೋಗುವವರು ತಮ್ಮ ಜೊತೆ ಮೊಬೈಲ್ ಕೊಂಡೊಯ್ಯುವಂತಿಲ್ಲ.

ದೇವಾಲಯದ ಆವರಣದಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದ್ದು, ಇದರಿಂದ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ತಿರುಪತಿ ದೇವಾಲಯದ ಮಾದರಿಯಲ್ಲಿ ಇಲ್ಲೂ ಕೂಡ ಮೊಬೈಲ್ ತರುವುದನ್ನು ನಿಷೇಧಿಸಲಾಗುತ್ತಿದೆ ಎನ್ನಲಾಗಿದೆ.

ಮೊಬೈಲ್ ನಿಷೇಧ ಮಾಡುವುದರಿಂದ ದೇವಿಯ ಛಾಯಾಚಿತ್ರ ಯಾರೂ ತೆಗೆಯುವುದಿಲ್ಲ ಮತ್ತು ಯಾವುದೇ ಕಿರಿಕಿರಿ ಉಂಟಾಗುವುದಿಲ್ಲ. ಇದಕ್ಕೆ ಪೂರಕವಾಗಿ ದೇಗುಲಕ್ಕೆ ಭೇಟಿ ನೀಡುವ ಭಕ್ತರ ಮೊಬೈಲ್ ಇಡಲು ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News