×
Ad

ಮೈಸೂರು: ಬ್ಯಾಂಕುಗಳ ವಿಲೀನ ನೀತಿ ಖಂಡಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

Update: 2018-12-26 22:09 IST

ಮೈಸೂರು,ಡಿ.26: ಕೇಂದ್ರ ಸರ್ಕಾರದ ಬ್ಯಾಂಕುಗಳ ವಿಲೀನೀಕರಣ ನೀತಿಯನ್ನು ಖಂಡಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜ ಡಬಲ್ ರೋಡ್ ನಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು, ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್, ದೇನಾ ಬ್ಯಾಂಕ್ ವಿಲೀನ ಖಂಡಿಸಿ ಪ್ರತಿಭಟನೆ ನಡೆಸಿದರಲ್ಲದೇ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿದರು.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿಲೀನ ನೀತಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಮಾತನಾಡಿ, ಈ ನೀತಿಯಿಂದ ಸಾವಿರಾರು ಬ್ಯಾಂಕ್ ನೌಕರರು ಕೆಲಸ ಕಳೆದುಕೊಳ್ಳುತ್ತಾರೆ. ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚುತ್ತದೆ. ಬ್ಯಾಂಕ್ ಗಳ ವಿಲೀನದಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಬಹುದೊಡ್ಡ ಸಮಸ್ಯೆ ಎದುರಾಗಲಿದೆ. ಸಾರ್ವಜನಿಕರಿಗೂ ಪರದಾಡುವಂತಹ ಸ್ಥಿತಿ ಎದುರಾಗಲಿದೆ. ಕೂಡಲೇ ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಿಲ್ಲಿಸದಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ಹಲವು ಮಂದಿ ಬ್ಯಾಂಕ್ ನೌಕರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News